ಕೊಂಡೆವೂರು: ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ನಾಳೆ

ಉಪ್ಪಳ :ಕೊಂಡೆವೂರು: ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ನಾಳೆ ನಡೆಯಲಿದೆ.ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಯೋಗಾಶ್ರಮದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ದೀಪ ಬೆಳಗಿಸಿ ಉಧ್ಘಾಟಿಸಿ ಆಶೀರ್ವಚನ ನೀಡುವರು.ಈ ಸಂಧರ್ಭದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಏಷ್ಯಾನೆಟ್ ಸುವರ್ಣ ವಾಹಿನಿಯ ಸುದ್ದಿ ಸಂಪಾದಕ ಅಜಿತ್ ಹನುಮಕ್ಕ ನವರು ಮುಖ್ಯ ಭಾಷಣ ಮಾಡಲಿದ್ದಾರೆ.

ಕಾರ್ಗಿಲ್ ಯುದ್ಧ ವೀರ ಹವಲ್ದಾರ್ ಜಾನಿ ಮಾಥು ರಾಜಪುರಂ ಉಪಸ್ಥಿತರಿರುವರು, ಬ್ರಿಗೇಡಿಯರ್ ಐ.ಎನ್.ರೈ ಕುಂಬಳೆ, ಕಮಾಂಡರ್ ಕೆ.ವಿಜಯಕುಮಾ‌ರ್ ಕಣ್ಣತೀರ್ಥ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಂಗಳೂರು, ಸುಕೇಶ್ ಹೆಗ್ಗಡೆ ಬೆಂಗಳೂರು ಎಂಬಿವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮವಿರುವುದು.

SHARE
Loading spinner

Leave a Reply

Your email address will not be published. Required fields are marked *

error: Content is protected !!