ಮಧೂರು ಗ್ರಾಮ ಪಂಚಾಯತ್‌ನ 24ನೇ ಸಿರಿಬಾಗಿಲು ವಾರ್ಡ್ ಹಾಗೂ ಪರಿಸರದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಾಲ್ಕನೇ ವರ್ಷದ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ಸಿರಿಬಾಗಿಲು ಉಡುವ ಕಜೆ ಶ್ರೀ ಚೌಕಾರು ಗುಳಿಗ ಹಾಗೂ ಶ್ರೀ ಕೊರಗತನಿಯ ದಿವ್ಯಸನ್ನಿಧಿಯಲ್ಲಿ ವಿಜೃಂಭಣೆಯಿಂದ ನಡೆಯಿತು.

2025-26ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ತರಗತಿಗಳಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಹಾಗೂ ಉತ್ತಮ ಅಂಕಗಳನ್ನು ಗಳಿಸಿದ ಅರ್ಹ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಮಧೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾನುಪ್ರಕಾಶ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಧೂರು ಗ್ರಾಮ ಪಂಚಾಯತ್ 24ನೇ ಸಿರಿಬಾಗಿಲು ವಾರ್ಡ್ ಸದಸ್ಯ ನವನೀತ್ ರೈ ಕಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಧೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ರೈ ಸಿರಿಬಾಗಿಲು, ದಿವ್ಯಸನ್ನಿಧಿಯ ದೈವದಪಾತ್ರಿ ರಾಮಚಂದ್ರ ಕಜೆ ಹಾಗೂ ರಾಮಚಂದ್ರ ಕುದ್ರೆಪ್ಪಾಡಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಅಜಿತ್ ಮಾಸ್ಟರ್ ಕಜೆ ಸ್ವಾಗತಿಸಿದರು. ರಂಜು ರಾಮ್ ನಗರ, ಬೆದ್ರಡ್ಕ ವಂದಿಸಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರತಿವರ್ಷ ನಡೆಯುತ್ತಿರುವ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಯಿತು.

