ಕಾಸರಗೋಡು : ನಗರದ ಎಂ.ಜಿ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ಯಾಂಕರ್ ಲಾರಿ ಹರಿದು ತಳಂಗರೆ ಬಾಂಗೋಡು ನಿವಾಸಿ ಹನೀಫಾ (55) ದಾರುಣವಾಗಿ ಸಾವನ್ನಪ್ಪಿದ್ದಾರೆ.

ವಿದ್ಯಾನಗರದಲ್ಲಿ ಪ್ಲೆಕ್ಸ್ ಅಂಗಡಿ ಹೊಂದಿದ್ದ ಹನೀಫಾ ಅವರು ಸ್ಕೂಟರ್‌ನಲ್ಲಿ ಹೊಸ ಬಸ್ ನಿಲ್ದಾಣದಿಂದ ಹಳೆ ಬಸ್ ನಿಲ್ದಾಣದ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.ಲಾರಿ ಢಿಕ್ಕಿ ಹೊಡೆದು ಕೆಳಗೆ ಬಿದ್ದ ಇವರ ಕಾಲಿನ ಮೇಲೆ ಲಾರಿಯ ಚಕ್ರ ಹರಿದಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಕಾಸರಗೋಡು ಮತ್ತು ಮಂಗಳೂರಿನ ಆಸ್ಪತ್ರೆಗಳಲ್ಲಿ ದಾಖಲಿಸಿ ಉನ್ನತ ಚಿಕಿತ್ಸೆ ನೀಡಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


