ಎನ್‌ಸಿಸಿ ಕೊಠಡಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ಶಿಕ್ಷಕನಿಗೆ 7 ವರ್ಷ ಜೈಲು

​ಕಾಸರಗೋಡು: ಶಾಲೆಯ ಎನ್‌ಸಿಸಿ ಕೊಠಡಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಶಿಕ್ಷಕನಿಗೆ ಕಾಸರಗೋಡು ಫಾಸ್ಟ್ ಟ್ರಾಕ್ ಸ್ಪೆಷಲ್ ನ್ಯಾಯಾಲಯವು 7 ವರ್ಷಗಳ ಕಠಿಣ ಕಾರಾಗೃಹವಾಸ ಹಾಗೂ 70,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

​ಮೈರೆ ಗ್ರಾಮದ ಇಬ್ರಾಹಿಂ ಎಂ. (54) ಶಿಕ್ಷೆಗೊಳಗಾದ ಅಧ್ಯಾಪಕ. 2022ರ ನವೆಂಬರ್‌ನಲ್ಲಿ ಎನ್‌ಸಿಸಿ ಕೊಠಡಿಯಲ್ಲಿ ಈ ಕೃತ್ಯ ನಡೆದಿದ್ದು, ಪೋಕ್ಸೊ ಹಾಗೂ ಜೆ.ಜೆ. ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

​ಪೊಲೀಸರ ತನಿಖೆ ಮತ್ತು ವಿಶೇಷ ಸರಕಾರಿ ಅಭಿಯೋಜಕರ ವಾದವನ್ನು ಪರಿಗಣಿಸಿದ ನ್ಯಾಯಾಧೀಶ ಕೆ. ಸಂತೋಷ್ ಕುಮಾರ್ ಅವರು ಈ ತೀರ್ಪು ಪ್ರಕಟಿಸಿದ್ದಾರೆ. ದಂಡ ಪಾವತಿಸದಿದ್ದರೆ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!