ಕಾಸರಗೋಡು: ಚಲಿಸುತ್ತಿದ್ದ ಒಕ್ಕಾ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಚೇಷ್ಟೆ ನಡೆಸಿದ ಮಧ್ಯವಯಸ್ಕ ವ್ಯಕ್ತಿಯನ್ನು ಕಾಸರಗೋಡು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.

ಕಣ್ಣೂರು ಜೋಸ್ಗಿರಿ ನಿವಾಸಿ ಜೋಸ್ ಮ್ಯಾಥ್ಯು (53) ಬಂಧಿತ ಆರೋಪಿ.
ಶನಿವಾರ ಮುಂಜಾನೆ ಕಾಸರಗೋಡು ರೈಲು ನಿಲ್ದಾಣಕ್ಕೆ ರೈಲು ಬಂದ ತಕ್ಷಣ, ಆರೋಪಿ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ತಕ್ಷಣ ಎಚ್ಚೆತ್ತ ಯುವತಿಯೊಬ್ಬರು ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡರು
. ಬಳಿಕ ಆತನನ್ನು ರೈಲಿನಿಂದ ಕೆಳಗೆ ಇಳಿಸಿ ಠಾಣೆಗೆ ಕರೆದೊಯ್ದು, ಕಾನೂನು ಪ್ರಕ್ರಿಯೆಯಂತೆ ನೋಟೀಸ್ ಜಾರಿಗೊಳಿಸಿ ಬಿಡುಗಡೆ ಮಾಡಲಾಗಿದೆ.

