ಶ್ರೀರಾಮ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಂಭ್ರಮದ ಓಣಂ ಆಚರಣೆ

ಮನ್ನಿಪಾಡಿ: ಶಿವನಗರ–ಮನ್ನಿಪಾಡಿಯ ಶ್ರೀರಾಮ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಂಭ್ರಮದ ಓಣಂ ಆಚರಣೆ–2026 ಕಾರ್ಯಕ್ರಮವು ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಸಂದೀಪ್ ಮನ್ನಿ ಪಾಡಿ ಸ್ವಾಗತ ಭಾಷಣವನ್ನು ನಡೆಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅಜಯ್ ಮನ್ನಿಪಾಡಿ ವಹಿಸಿದ್ದರು. ಶ್ರೀ ವಿನೋದ್ ಕುಮಾರ್ ಕೆ.ಕೆ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶಶಿ ಕ್ಲಿನಿಕ್‌ನ ಡಾ. ತೇಜಸ್ವಿ ವ್ಯಾಸ ಅವರು ಉದ್ಘಾಟಿಸಿದರು.


ಓಣಂ ಹಬ್ಬದ ಹಿನ್ನೆಲೆಯಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು ಹಾಗೂ ಮನರಂಜನಾ ಚಟುವಟಿಕೆಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು. ಸ್ಥಳೀಯರು ಹಾಗೂ ಕ್ಲಬ್‌ನ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಓಣಂ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಾಣಿ ಅವರು ಬಹುಮಾನ ವಿತರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಶ್ರೀ ತಿಲಕ್ ರಾಜ್ ಅವರು ಧನ್ಯವಾದ ಸಮರ್ಪಿಸಿದರು.
ಒಗ್ಗಟ್ಟು, ಸ್ನೇಹ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಓಣಂ ಆಚರಣೆಯು ಎಲ್ಲರ ಗಮನ ಸೆಳೆಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!