ಕುಂಬಳೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ ಕುಂಬಳೆ ಮಂಜೇಶ್ವರ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಿ ಸಹಯೋಗದಲ್ಲಿ ಜಿಎಚ್ ಎಸ್ ಎಸ್ ಕುಂಬಳೆ ಶಾಲೆಯಲ್ಲಿ ಸುಮಾರು 90 ವಿದ್ಯಾರ್ಥಿ ಗಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಶಾರದಾ ದೀಪ ಬೆಳಗಿಸಿ ಉದ್ಘಾಟಿಸಿ ಮಾದಕ ವಸ್ತುವಿನಿಂದ ಆಗುವ ದುಷ್ಪರಿಣಾಮದ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು .ಕಾರ್ಯಕ್ರಮದಲ್ಲಿ ಕುಂಬಳೆ ವಲಯದ ಮೇಲ್ವಿಚಾರಕರಾದ ಅಭಿಷೇಕ್, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಕುಂಬಳೆ ವಲಯಾಧ್ಯಕ್ಷ ಮಹೇಶ್ ಪುಣಿಯೂರು,ಜನ ಜಾಗೃತಿ ವೇದಿಕೆಯ ಸದಸ್ಯರಾದ ವಿದ್ಯಾ ಪೈ,ಸೇವಾಪ್ರತಿನಿಧಿ ಈರಮ್ಮ, ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೊಹಮ್ಮದ್ ಅಜಿಜ್ ಉಪಸ್ಥಿತರಿದ್ದರು.ಶಾಲೆಯ ಅಧ್ಯಾಪಕರು ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಿಂದ ಒಳ್ಳೆಯ ಮಾಹಿತಿ ಮಕ್ಕಳಿಗೆ ದೊರೆತಿದೆ ಎಂದು ಧನ್ಯವಾದಗಳನ್ನು ತಿಳಿಸಿದರು.


