ಕಾಸರಗೋಡು: ಮಗಳ ಸ್ನೇಹಿತೆಯಾದ 10ನೇ ತರಗತಿಯ ಬಾಲಕಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಸೆಬಾಸ್ಟಿಯನ್ ಎಂಬ ವ್ಯಕ್ತಿಯ ವಿರುದ್ಧ ಚಿಟ್ಟಾರಿಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿ ಮತ್ತು ಆತನ ಮಗಳು ಒಂದೇ ಮೊಬೈಲ್ ಫೋನ್ ಬಳಸುತ್ತಿದ್ದು, ಈ ಮೂಲಕ ಬಾಲಕಿಯ ಫೋನ್ ಸಂಖ್ಯೆ ಆರೋಪಿಗೆ ಸಿಕ್ಕಿರಬಹುದು ಎಂದು ಶಂಕಿಸಲಾಗಿದೆ.ಪೋಷಕರ ಸ್ಥಾನದಲ್ಲಿದ್ದುಕೊಂಡು ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಈ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸದ್ಯ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಸುದೀರ್ಘ ವಿಚಾರಣೆ ನಡೆಸಿದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಹಾಗೂ ಸ್ಫೋಟಕ ಮಾಹಿತಿಗಳು ಹೊರಬರುವ ಸಾಧ್ಯತೆಯಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

