ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್‌ಗೆ ಆಯ್ಕೆಯಾದ ವಿದ್ಯಾರ್ಥಿ ನಾಯಕರ ಪ್ರತಿಜ್ಞಾ ಸ್ವೀಕಾರ

ಮಂಜೇಶ್ವರ : ಹೊಸಂಗಡಿ ಹಾಗೂ ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ವಿದ್ಯಾರ್ಥಿ ಸಂಸತ್‌ಗೆ ಆಯ್ಕೆಯಾದ ವಿದ್ಯಾರ್ಥಿ ನಾಯಕರ ಪ್ರತಿಜ್ಞಾ ಸ್ವೀಕಾರ ಹಾಗೂ ಶಿಕ್ಷಕ ಶಿಕ್ಷಕಿಯರು ಸೇರಿದಂತೆ ಎಲ್ಲಾ ಸಿಬ್ಬಂದಿಗಳಿಗೂ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ಮಾಡಿದ ಶಾಲೆಯ ಈ ಕ್ರಮ ಶ್ಲಾಘನೆಗೆ ಕಾರಣವಾಗಿತ್ತು. ಜೊತೆಯಾಗಿ ಮಕ್ಕಳಿಗೆ ದೇಶದ ರಾಜಕೀಯ ವ್ಯವಸ್ಥೆಯನ್ನು ತಿಳಿಯುವಲ್ಲಿ ಸಹಕಾರವಾಗುವ ನಿಟ್ಟಿನಲ್ಲಿ ಚುನಾವಣಾ ಪ್ರಕ್ರಿಯೆ ನಡೆಸಲಾಗಿತ್ತು.ಶಾಲಾ ಪ್ರಾಂಶುಪಾಲರಾದ ಅಬ್ದುಲ್ ಖಾದರ್ ಸಮಾರಂಭವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು (byt) ವಿದ್ಯಾರ್ಥಿ ಸಂಸತ್‌ನ ಮಹತ್ವ, ನಾಯಕತ್ವದ ಗುಣ, ಜವಾಬ್ದಾರಿ ಮತ್ತು ಶಿಸ್ತಿನ ಬಗ್ಗೆ ಪ್ರೇರಣಾದಾಯಕವಾಗಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ ಕೊಟ್ಟರು.

ಶಾಲಾ ಚೇಯರ್ಮ್ಯಾನ್ ಅಬ್ದುಲ್ ರಹ್ಮಾನ್ ಅರಿಮಲ ಪ್ರಶಸ್ತಿ ವಿತರಣೆ ನಡೆಸಿದರು.ಬಳಿಕ ಶಾಲಾ ವಿದ್ಯಾರ್ಥಿ ಸಂಸತ್ ಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಖಾತೆಗಳ ಹಂಚಿಕೆ ಮಾಡಿ ಆಯಾ ವರ್ಷದ ಶಾಲಾ ಜವಾಬ್ದಾರಿ ನೀಡಲಾಯಿತು. ಪ್ರಧಾನ ಮಂತ್ರಿ, ಶಿಕ್ಷ ಣ ಮಂತ್ರಿ, ಸ್ವಚ್ಛತಾ ಮಂತ್ರಿ, ಗ್ರಂಥಾಲಯ ಪಾಲನೆ, ರಕ್ಷ ಣಾ ಮಂತ್ರಿ, ಆಹಾರ ಮಂತ್ರಿ ಹೀಗೆ ನಾನಾ ಖಾತೆಗಳನ್ನು ನೀಡಿ ಮಕ್ಕಳಿಗೆ ಜವಾಬ್ದಾರಿಯ ಹುದ್ದೆಯನ್ನು ನೀಡಲಾಯಿತು. ಎಲ್ಲ ಆಯ್ಕೆಯಾದ ವಿದ್ಯಾರ್ಥಿ ನಾಯಕರು ಶ್ರದ್ಧೆಯಿಂದ ಮತ್ತು ಸತ್ಯನಿಷ್ಠೆಯಿಂದ ತಮ್ಮ ಹುದ್ದೆಗಳ ಶಪಥವನ್ನು ಸ್ವೀಕರಿಸಿದರು.

ಇದರಿಂದಾಗಿ ವರ್ಷವಿಡೀ ಶಾಲೆಯ ನಿರ್ವಹಣೆ ಕಾರ್ಯದಲ್ಲಿ ಶಿಸ್ತು ಹಾಗೂ ಇತರ ವಿಷಯಗಳಲ್ಲಿ ಶಿಕ್ಷಕರಿಗೆ ವಿದ್ಯಾರ್ಥಿಗಳು ಸಹಾಯಕರಾಗುತ್ತಾರೆ. ಶಾಲಾ ಆಡಳಿತ ಮಂಡಳಿಯ ಈ ತಂತ್ರದಿಂದ ಮಕ್ಕಳಿಗೆ ದೇಶದ ರಾಜಕೀಯ ವ್ಯವಸ್ಥೆಯ ಬಗ್ಗೆ ಪ್ರಾಯೋಗಿಕ ಅನುಭವ ಸಿಗಲಿದೆ.
ಬಳಿಕ ಶಾಲಾ ಶಿಕ್ಷಕ ಶಿಕ್ಷಕಿ ಹಾಗೂ ಎಲ್ಲಾ ಸಿಬ್ಬಂದಿಗಳಿಗೂ ಗೌರವ ಪ್ರಶಸ್ತಿ ಹಾಗೂ ಕೊಡುಗೆಯನ್ನು ನೀಡಿ ಗೌರವಿಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!