ಖ್ಯಾತ ಕವಿ, ಭಾಷಾ ವಿಜ್ಞಾನಿ ವಿ.ಬಿ. ಕುಳಮರ್ವ ಅವರಿಗೆ ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ

ಕಾಸರಗೋಡು, ಸೆ. 19: ಕಾಸರಗೋಡು ಕನ್ನಡ ಭವನದ ನೇತೃತ್ವದಲ್ಲಿ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ಅ.11ರಿಂದ 20ರವರೆಗೆ ನಡೆಯಲಿರುವ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ರ ಅಂಗವಾಗಿ ಅ.18ರಂದು ನಡೆಯುವ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಖ್ಯಾತ ಕವಿ ಹಾಗೂ ಭಾಷಾ ವಿಜ್ಞಾನಿ ವಿ.ಬಿ. ಕುಳಮರ್ವ ಅವರಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ ನೀಡಿ ಗೌರವಿಸಲಾಗುವುದು.

ಅ.18ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕವಿ ಸಮ್ಮೇಳನವು ಸಾಹಿತ್ಯ ಸಂಘಟಕ ಬಿ. ಶ್ರೀನಿವಾಸ್ ಬಹಾದ್ದೂರ್ ಅವರ ಸರ್ವಾಧ್ಯಕ್ಷತೆಯಲ್ಲಿ ಜರುಗಲಿದ್ದು, ಚುಟುಕು ಬ್ರಹ್ಮ ಹಾಗೂ ಚುಟುಕು ಸಾಹಿತ್ಯ ಪರಿಷತ್ ಸಂಸ್ಥಾಪಕ ಡಾ. ಎಂ.ಜಿ.ಆರ್. ಅರಸ್ (ಮೈಸೂರು) ಉದ್ಘಾಟಿಸಲಿದ್ದಾರೆ. ಮೈಸೂರಿನ ಖ್ಯಾತ ಕವಿ, ಸಾಹಿತ್ಯ ರತ್ನ ಜಯಪ್ಪ ಹೊನ್ನಾಳಿ (ಜಯ ಕವಿ ಮೈಸೂರು) ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.

ರಾಷ್ಟ್ರಮಟ್ಟದ 75 ಕವಿಗಳು ಭಾಗವಹಿಸಲಿರುವ ಈ ಸಮ್ಮೇಳನದಲ್ಲಿ 21 ಮಂದಿ ಕವಿಗಳಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ ನೀಡಿ ಗೌರವಿಸಲಾಗುವುದು ಎಂದು ಕಾಸರಗೋಡು ದಸರಾ ಸಂಚಾಲಕ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಮತ್ತು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಪಾಂಗೋಡು ಪ್ರವೀಣ್ ನಾಯಕ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!