ಜನಪ್ರಿಯ ಕವಿ, ಲೇಖಕಿ ಶ್ರೀಮತಿ ರೇಖಾ ಸುದೇಶ್ ರಾವ್ ಮಂಗಳೂರು ರಿಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ -2026.ಕ್ಕೆ ಆಯ್ಕೆ

ಕಾಸರಗೋಡು : ಅಕ್ಟೋಬರಿನ 11.ಭಾನುವಾರದಿಂದ 20.10.2026ರ ವರೆಗೆ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಸಾರತ್ಯದಲ್ಲಿ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ “2026.ರ ಅಂಗವಾಗಿ 18.10.2026 ಭಾನುವಾರ ಬೆಳಿಗ್ಗಿನ 11 ಗಂಟೆಯಿಂದ ಉದ್ಘಾಟನೆ ಗೊಳ್ಳುವ “ಕಾಸರಗೋಡು ದಸರಾ ಕವಿ ಸಮ್ಮೇಳನ “ದಲ್ಲಿ ಇವರೀಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ “ನೀಡಿ ಗೌರವಿಸಲಾಗುವದು.

ಸಾಹಿತ್ಯ ಸಂಘಟಕ, ಬಿ. ಶ್ರೀನಿವಾಸ್ ಬಹಾದ್ದೂರ್ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ದಸರಾ ಕವಿ ಸಮ್ಮೇಳನ ಚುಟುಕು ಬ್ರಹ್ಮ, ಚುಟುಕು ಸಾಹಿತ್ಯ ಪರಿಷತ್ ಸಂಸ್ಥಾಪಕ ಡಾ. ಎಮ್. ಜಿ. ಆರ್. ಅರಸ್ ಮೈಸೂರು ಉದ್ಘಾಟನೆ ಗೈಯ್ಯಲಿದ್ದಾರೆ.

ಮೈಸೂರಿನ ಖ್ಯಾತ ಕವಿ ಸಾಹಿತ್ಯ ರತ್ನ ಜಯಪ್ಪ ಹೊನ್ನಾಳಿ (ಜಯ ಕವಿ ಮೈಸೂರು )ಅದ್ಯಕ್ಷತೆಯಲ್ಲಿ ಕಾಸರಗೋಡು ದಸರಾ ಕವಿಗೋಷ್ಠಿ ನಡೆಯಲಿದೆ. ರಾಷ್ಟ್ರ ಮಟ್ಟದ 75ಮಂದಿ ಕವಿಗಳು ಭಾಗವಹಿಸುವ ಈ ಕಾರ್ಯಕ್ರಮ ದಲ್ಲಿ 21ಮಂದಿ ಕವಿಶ್ರೇಷ್ಠ ರಿಗೆ ರಾಷ್ಟ್ರೀಯ ಮಟ್ಟದ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026.ನೀಡಿ ಗೌರವಿಸಲಿದ್ದೇವೆ ಎಂದು ಕಾಸರಗೋಡು ದಸರಾ ಸಂಚಾಲಕರಾದ, ಕನ್ನಡ ಭವನ ಸ್ಥಾಪಕ ಅಧ್ಯಕ್ಷರೂ ಆದ ಡಾ. ವಾಮನ್ ರಾವ್ ಬೇಕಲ್ ಹಾಗೂ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನ ಸಾಂಸ್ಕೃತಿಕ ಘಟಕ ಅಧ್ಯಕ್ಷರಾದ ಪಾಂಗೋಡು ಪ್ರವೀಣ್ ನಾಯಕ್ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!