ಬಾಯಾರು ಆರೋಗ್ಯ ಕೇಂದ್ರದಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ: ಸಿಪಿಎಂ ಪ್ರತಿಭಟನೆ

​ಬಾಯಾರು: ಸ್ಥಳೀಯ ಕುಟುಂಬ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಗಡುವು ಮುಗಿದ ಮಾತ್ರೆಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಆಸ್ಪತ್ರೆಯಲ್ಲಿ ಸಿಬ್ಬಂದಿ ಮತ್ತು ಅತ್ಯಗತ್ಯ ಔಷಧಿಗಳ ಕೊರತೆಯನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.

​ಮುಳಿಗದ್ದೆ ವಾರ್ಡ್ ಸದಸ್ಯ ಝಕರಿಯ ಬಾಯಾರು ಅಧ್ಯಕ್ಷತೆಯಲ್ಲಿ ನಡೆದ ಈ ಧರಣಿಗೆ ಸಿಪಿಎಂ ಏರಿಯಾ ಸದಸ್ಯ ಅಬ್ದುಲ್ ರಜಾಕ್ ಚಿಪ್ಪಾರು ಚಾಲನೆ ನೀಡಿದರು.

ಈ ಸಂದರ್ಭ ನೇತಾರರು ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

SHARE
Loading spinner

Leave a Reply

Your email address will not be published. Required fields are marked *

error: Content is protected !!