ಹೆಣ್ಣುಮಕ್ಕಳ ಫೋಟೋ ಮಾರ್ಫಿಂಗ್ ಪ್ರಕರಣ: ಸೈಬರ್ ಕ್ರೈಮ್ ಪೊಲೀಸರಿಂದ ಮತ್ತೊಬ್ಬ ಆರೋಪಿಯ ಬಂಧನ

​ಕಾಸರಗೋಡು: ಹೆಣ್ಣುಮಕ್ಕಳ ಫೋಟೋಗಳನ್ನು ಅವರ ಅನುಮತಿಯಿಲ್ಲದೆ ಸಂಗ್ರಹಿಸಿ, ತಂತ್ರಜ್ಞಾನ ಬಳಸಿ ಅಶ್ಲೀಲ ಚಿತ್ರಗಳನ್ನಾಗಿ ಮಾರ್ಫ್ ಮಾಡಿ ಟೆಲಿಗ್ರಾಂ ಗ್ರೂಪ್‌ಗಳಲ್ಲಿ ಹಂಚಿಕೊಳ್ಳುತ್ತಿದ್ದ ಪ್ರಕರಣದ ಮುಖ್ಯ ಆರೋಪಿಯನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.

ಮಲಪ್ಪುರಂ ಪೂಕ್ಕಾಟ್ಟಿರಿ ಮೂಲದ ನಿಕೇತ್ (24) ಬಂಧಿತ ಆರೋಪಿ. ಈ ಪ್ರಕರಣದ ಮೊದಲ ಆರೋಪಿ, ಇರಿಯಣ್ಣಿ ಮೂಲದ ಅನೂಪ್‌ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು.

​ಅನೂಪ್ ನೀಡಿದ ಫೋಟೋಗಳನ್ನು ನಿಕೇತ್ ಎಡಿಟ್ ಮಾಡಿ ಅಶ್ಲೀಲ ಚಿತ್ರಗಳನ್ನಾಗಿ ಬದಲಾಯಿಸುತ್ತಿದ್ದನೆಂದು ತನಿಖೆಯಲ್ಲಿ ತಿಳಿದುಬಂದಿದೆ.

ಸೆಪ್ಟೆಂಬರ್ 25 ರಂದು ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಕ್ಟೋಬರ್ 9 ರವರೆಗೆ ರಿಮಾಂಡ್‌ಗೆ ಒಳಪಡಿಸಲಾಗಿದೆ.

ಘಟನೆಗೆ ಸಂಬಂಧಿಸಿದ ಡಿಜಿಟಲ್ ಉಪಕರಣಗಳು ಹಾಗೂ ಟೆಲಿಗ್ರಾಂ ಗ್ರೂಪ್‌ಗಳ ಸಾಕ್ಷ್ಯಾಧಾರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!