ಸಿಪಿಎಂ ಕಾರ್ಯಕರ್ತನ ಸ್ಕೂಟರ್‌ಗೆ ದುಷ್ಕರ್ಮಿಗಳು ಬೆಂಕಿ

ಕಾಸರಗೋಡು: ಸೋಮವಾರ ಮುಂಜಾನೆ ಮನೆ ಅಂಗಳದಲ್ಲಿ ನಿಲ್ಲಿಸಲಾಗಿದ್ದ ಸಿಪಿಎಂ ಕಾರ್ಯಕರ್ತನ ಸ್ಕೂಟರ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಭಸ್ಮಗೊಳಿಸಿದ್ದಾರೆ.

​ನೀಲೇಶ್ವರ ಕೋಯಾಬುರಂ ಇಟ್ಟುಪಾರದ ಪ್ರಕಾಶನ್ ಎಂಬವರ ಮನೆಮುಂದೆ ನಿಲ್ಲಿಸಿದ್ದ ಸ್ಕೂಟರ್ ಬೆಂಕಿಗಾಹುತಿಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೃತ್ಯದ ಸುದ್ದಿ ತಿಳಿಯುತ್ತಿದ್ದಂತೆ ನಗರಸಭಾ ಕೌನ್ಸಿಲರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

​ಘಟನೆಗೆ ಕಾರಣರಾದ ದುಷ್ಕರ್ಮಿಗಳನ್ನು ತಕ್ಷಣವೇ ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಕೌನ್ಸಿಲರ್ ಒತ್ತಾಯಿಸಿದ್ದಾರೆ.

ಪ್ರಕಾಶನ್ ನೀಡಿದ ದೂರಿನ ಆಧಾರದಲ್ಲಿ ನೀಲೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ಕೈಗೆತ್ತಿಕೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!