ಕಾಸರಗೋಡು : ವೆಳ್ಳರಿಕುಂಡ್ನಲ್ಲಿ 9ನೇ ತರಗತಿಯ ಬಾಲಕಿ ದೈಹಿಕ ಅಸ್ವಸ್ಥತೆಯಿಂದ ಆಸ್ಪತ್ರೆಗೆ ದಾಖಲಾದಾಗ, ಆಕೆ 4 ತಿಂಗಳ ಗರ್ಭಿಣಿಯೆಂಬ ಆಘಾತಕಾರಿ ವಿಷಯ ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ. ವೈದ್ಯಕೀಯ ತಪಾಸಣೆಯ ಬಳಿಕ ಆಸ್ಪತ್ರೆ ಅಧಿಕಾರಿಗಳು ತಕ್ಷಣವೇ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ವೆಳ್ಳರಿಕುಂಡ್ ಪೊಲೀಸರು ತನಿಖೆ ಕೈಗೊಂಡು, ಬಾಲಕಿಯ ಸ್ನೇಹಿತನಾದ 18 ವರ್ಷದ ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ತಲೆಮರೆಸಿಕೊಂಡಿರುವ ಆರೋಪಿ ಯುವಕನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

