ಮಾದಕ ದ್ರವ್ಯ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

​ಕಾಸರಗೋಡು: ಮಾದಕ ದ್ರವ್ಯ ಹೊಂದಿದ್ದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ) ಒಂದು ವರ್ಷದ ಕಠಿಣ ಜೈಲು ಶಿಕ್ಷೆ ಹಾಗೂ 20,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಮಧೂರು ಚೆಟ್ಟುಂಗುಳಿ ನಿವಾಸಿ ಅಬ್ದುಲ್ ರಹ್ಮಾನ್ (39) ಶಿಕ್ಷೆಗೆ ಒಳಗಾದ ವ್ಯಕ್ತಿ. ದಂಡ ತೆರಲು ವಿಫಲವಾದರೆ ಹೆಚ್ಚುವರಿ ಎರಡು ತಿಂಗಳ ಶಿಕ್ಷೆ .

​2021ರ ಸೆಪ್ಟೆಂಬರ್ 15ರಂದು ಚೆಟ್ಟುಂಗುಳಿಯಲ್ಲಿ ವಿದ್ಯಾನಗರ ಪೊಲೀಸರು ದಾಳಿ ನಡೆಸಿ, ಆರೋಪಿಯಿಂದ 34.15 ಗ್ರಾಂ ಚರಸ್ ಹಾಗೂ 2.31 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು.

ಪ್ರಕರಣದ ತನಿಖೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಸರ್ಕಾರಿ ಅಭಿಯೋಜಕರಾದ ಜಿ. ಮೋಹನನ್ ಮತ್ತು ಚಿತ್ರಕಲಾ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದರು. ನ್ಯಾಯಾಧೀಶ ರಾಮು ರಮೇಶ್‌ಚಂದ್ರ ಭಾನು ಅವರು ಈ ಅಂತಿಮ ಆದೇಶ ಹೊರಡಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!