ಚೇವಾರು: ಗಾಂಧೀ ಜಯಂತಿ ಆಚರಣೆಯ ಅಂಗವಾಗಿ ಚೇವಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕಲಂದರ್ ಶಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ., ಗಾಂಧೀಜಿಯವರ ಜೀವನ ಮತ್ತು ಸಂದೇಶಗಳನ್ನು ವಿವರಿಸಿದರು. ಶಾಲಾ ಮಾತೃ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸ್ಮಿತಾ ಹಾಗೂ ಶಿಕ್ಷಕ ರವಿಕುಮಾರ್ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ವಿದ್ಯಾರ್ಥಿಗಳಾದ ಮರಿಯಂ ಅರ್ಫಾ ಹಾಗೂ ಜಿತೇಶ್ ಪ್ರಬಂಧ ಮಂಡಿಸಿದರು.

ಬಳಿಕ ಶಾಲಾ ಪರಿಸರ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಶಿಕ್ಷಕಿ ಪ್ರಮೀಳಾ ಡಿ.ಎನ್. ಸ್ವಾಗತಿಸಿದರು. ಶಿಕ್ಷಕಿ ಪ್ರೀಮಾ ಕ್ರಾಸ್ತಾ ವಂದಿಸಿದರು. ಶಿಕ್ಷಕ ಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕರಾದ ಗೀತಾಂಜಲಿ, ಸಾತ್ವಿಕ್ ಎನ್., ಮುಹಮ್ಮದ್ ಫಾಹಿಸ್ ಹಾಗೂ ಗೋಪಾಲಕೃಷ್ಣ ಭಟ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.


