ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ವತಿಯಿಂದ ಸಾಹಿತ್ಯ ರಸಪ್ರಶ್ನೆ ಸ್ಪರ್ಧೆ

ಉಪ್ಪಳ : ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಮಂಜೇಶ್ವರ ಉಪಜಿಲ್ಲಾ ಸಮ್ಮೇಳನ ಹಾಗೂ ನಾಡ ಹಬ್ಬದ ಅಂಗವಾಗಿ ಕನ್ನಡ ಸಾಹಿತ್ಯ ರಸಪ್ರಶ್ನೆಯನ್ನು ಮುಳಿಂಜ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷರಾಗಿದ್ದ ಸತ್ಯನಾರಾಯಣ ಭಟ್ ದೈಗೋಳಿ ಯವರು ಉದ್ಘಾಟಿಸಿ ಮಾತನಾಡಿ, “ಮಕ್ಕಳಲ್ಲಿ ಸಾಹಿತ್ಯಭಿರುಚಿಯನ್ನು ಮೂಡಿಸಲು ಸಾಹಿತ್ಯ ರಸಪ್ರಶ್ನೆ ಕಾರ್ಯಕ್ರಮಗಳು ಪೂರಕವಾಗುತ್ತದೆ. ಇದರಿಂದಾಗಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಹಿರಿಯ ಸಾಹಿತಿಗಳು ನೀಡಿದ ಕೊಡುಗೆಗಳು, ಕನ್ನಡ ಸಂಸ್ಕೃತಿಯನ್ನು ಮತ್ತೊಮ್ಮೆ ಮೆಲುಕು ಹಾಕಿದಂತಾಗುತ್ತದೆ” ಎಂದು ತಿಳಿಸಿದರು.

ಉಪಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕ್ ಕೊಡ್ಲಮೊಗರು ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮುಳಿಂಜ ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ, ಸಂಘಟನಾ ಕಾರ್ಯದರ್ಶಿ ಜಬ್ಬಾರ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕೇಂದ್ರ ಸಮಿತಿ ಉಪಾಧ್ಯಕ್ಷರಾದ ಉಮೇಶ್ ಬೆರಿಪದವು,ಉಪಜಿಲ್ಲಾ ಉಪಾಧ್ಯಕ್ಷೆ ಹರಿಣಾಕ್ಷಿ, ಕೋಶಾಧಿಕಾರಿ ಕಿಶೋರ್ ಕುಮಾರ್ ಮೊದಲಾವರು ಉಪಸ್ಥಿತರಿದ್ದರು.ಉಪಜಿಲ್ಲಾ ಕಾರ್ಯದರ್ಶಿ ಸುನೀಲ್ ಕುಮಾರ್ ಸ್ವಾಗತಿಸಿ, ರಾಜೇಶ್ ಕಳಿಯೂರು ವಂದಿಸಿದರು. ಬಶೀರ್ ಮುಳಿಂಜ ಕಾರ್ಯಕ್ರಮ ನಿರೂಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!