ಕಾಸರಗೋಡು ಪೆರಿಯ ಕೇಂದ್ರ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಎಸ್‌ಎಫ್‌ಐ ಮೆರವಣಿಗೆಯಲ್ಲಿ ಘರ್ಷಣೆ, ಜಲಫಿರಂಗಿ ಪ್ರಯೋಗ

ಕಾಸರಗೋಡು: ಪೆರಿಯ ಕೇಂದ್ರ ವಿಶ್ವವಿದ್ಯಾಲಯದಲ್ಲಿ ವಂದೇ ಮಾತರಂ ವಿಚಾರ ಸಂಕಿರಣದ ವೇಳೆ ಪ್ರತಿಭಟನೆ ನಡೆಸಿದ ಐವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಕ್ರಮವನ್ನು ಖಂಡಿಸಿ ಎಸ್‌ಎಫ್‌ಐ ನಡೆಸಿದ ಮೆರವಣಿಗೆಯಲ್ಲಿ ಘರ್ಷಣೆ ಸಂಭವಿಸಿದೆ.ಬ್ಯಾರಿಕೇಡ್‌ಗಳನ್ನು ದಾಟಲು ಪ್ರಯತ್ನಿಸಿದ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.
ಇದೇ ವೇಳೆ, ವಿದ್ಯಾರ್ಥಿಗಳ ನೇತೃತ್ವದಲ್ಲಿ ವಿಶ್ವವಿದ್ಯಾಲಯದ ಆಡಳಿತಾತ್ಮಕ ವಿಭಾಗದ ಕಟ್ಟಡದ ಎದುರೂ ಪ್ರತಿಭಟನೆ ನಡೆಯಿತು .

ಅಮಾನತು ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಗುರುವಾರ ರಾತ್ರಿ ಪ್ರತಿಭಟನೆ ಆರಂಭಿಸಿದ್ದರು. ಅಮಾನತುಗೊಂಡ ವಿದ್ಯಾರ್ಥಿಗಳಿಗೆ ಎರಡು ವಾರಗಳ ಕಾಲ ವಿಶ್ವವಿದ್ಯಾಲಯದ ಆವರಣ ಹಾಗೂ ಹಾಸ್ಟೆಲ್‌ಗೆ ಪ್ರವೇಶಿಸುವುದನ್ನೂ ನಿರ್ಬಂಧಿಸಲಾಗಿದೆ.

ಎಸ್‌ಎಫ್‌ಐ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸಯ್ಯಿದ್ ಅಲಿ ಎಸ್., ಎಂಎಸ್‌ಎಫ್ ಕಾರ್ಯಕರ್ತ ಶಬೀರ್, ಎನ್‌ಎಸ್‌ಯುಐ ಘಟಕದ ಅಧ್ಯಕ್ಷ ಮೊಹಮ್ಮದ್ ಯಾಸಿನ್, ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಷನ್ ಮುಖಂಡ ತಖಿಯುದ್ದೀನ್ ಹಾಗೂ ಎಸ್‌ಎಫ್‌ಐ ಕಾರ್ಯಕರ್ತ ಅವೇದ್ ವಿ.ಬಿ. ಎಂಬಿವರನ್ನು ಅಮಾನತು ಗೊಳಿಸಲಾಗಿದೆ

SHARE
Loading spinner

Leave a Reply

Your email address will not be published. Required fields are marked *

error: Content is protected !!