ಕುಂಬಳೆ ಅನಂತಪುರ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ದುರಂತ: ಲಾರಿಯಿಂದ ಬಿದ್ದು ಕಾರ್ಮಿಕ ಸಾವು

​

ಕುಂಬಳೆ : ಅನಂತಪುರ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾರ್ಖಾನೆ ಕಾರ್ಮಿಕ, ಅಸ್ಸಾಂನ ನಾಗೋನ್ ನಿವಾಸಿ ಹಬೀಬುಲ್ ರಹ್ಮಾನ್ (51) ಜೀವ ಕಳೆದುಕೊಂಡಿದ್ದಾರೆ.

​ ಪ್ಲೈವುಡ್ ತುಂಬಿದ್ದ ಲಾರಿಯ ಮೇಲೆ ಹತ್ತಿ ಹಗ್ಗದಿಂದ ಕಟ್ಟುತ್ತಿದ್ದಾಗ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವು ಸಂಭವಿಸಿದೆ.

ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!