ಕಾಸರಗೋಡು: 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನ; 60 ವರ್ಷದ ಆರೋಪಿ ಬಂಧನ

ಕಾಸರಗೋಡು: ಆರರ ಹರೆಯದ ಸಣ್ಣ ಮಗುವಿಗೆ ಕಿರುಕುಳ ನೀಡಲು ಯತ್ನಿಸಿದ ಶಂಕಿತ ಆರೋಪಿಯನ್ನು ಚಂದೇರ ಠಾಣೆಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

ತೃಕರಿಪುರ ಬೀರಿಚ್ಚೇರಿಯ 60 ವರ್ಷದ ವ್ಯಕ್ತಿ ಬಂಧಿತ ಆರೋಪಿ.

​ಪಡನ್ನ ಪಂಚಾಯತ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ಈ ಆಘಾತಕಾರಿ ಘಟನೆ ಸಂಭವಿಸಿದೆ. ಆರೋಪಿಯು ಸಂತ್ರಸ್ತ ಬಾಲಕಿಯ ನೆರೆಮನೆಗೆ ಕೆಲಸದ ನಿಮಿತ್ತ ಬಂದಿದ್ದನು. ಈ ಸಂದರ್ಭದಲ್ಲಿ ಒಂಟಿಯಾಗಿದ್ದ ಮಗುವಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ.

ತಕ್ಷಣವೇ ಜಾಗರೂಕರಾದ ಬಾಲಕಿ ಆತನ ಹಿಡಿತದಿಂದ ರಕ್ಷಿಸಿಕೊಂಡು ಮನೆಗೆ ಓಡಿಬಂದು ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ತಕ್ಷಣವೇ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಕಸ್ಟಡಿಗೆ ಪಡೆದಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!