
ಕಾಸರಗೋಡು: ಕೊರಕೋಡು ಮಾರಿಗುಡಿ ಆರ್ಯ ಕಾತ್ಯಾಯಿನಿ ಶ್ರೀ ಮಹಾದೇವಿ ದೇವಸ್ಥಾನದಲ್ಲಿ ವಾರ್ಷಿಕ ನವರಾತ್ರಿ ಮಹೋತ್ಸವವು ಅಕ್ಟೋಬರ್ 11ರಂದು ಆರಂಭಗೊಂಡಿದ್ದು, ಅಕ್ಟೋಬರ್ 21ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಮಹೋತ್ಸವದ ಅಂಗವಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ಮಹಾದೇವಿಯ ಸೇವೆಯಲ್ಲಿ ಭಾಗವಹಿಸಿ, ಶ್ರೀ ದೇವಿಯ ಪ್ರಸಾದ ಸ್ವೀಕರಿಸಿ ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ದೇವಸ್ಥಾನದ ಅಧ್ಯಕ್ಷ ಬಿ. ಪುರುಷೋತ್ತಮ ರಾವ್ ಧರೆಕರ್ ವಿನಂತಿಸಿದ್ದಾರೆ.
ಭಕ್ತರು ಸಕಾಲದಲ್ಲಿ ಆಗಮಿಸಿ ನವರಾತ್ರಿ ಮಹೋತ್ಸವದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.




The mobile experience is just top notch. I can play my favorite games anywhere thanks to 7a777app.