ಕಾಸರಗೋಡು:ಕಾಸರಗೋಡಿನಲ್ಲಿ ಸರ್ಕಾರಿ ಅಧೀನದ ಭೂಮಿಯಲ್ಲಿ ಅಕ್ರಮವಾಗಿ ಕಲ್ಲುಗಳನ್ನು ಕಡಿಯುತ್ತಿರುವುದನ್ನು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಕಾಸರಗೋಡು ವಿಜಿಲೆನ್ಸ್ ಆ್ಯಂಡ್ ಆಂಟಿ ಕರಪ್ಷನ್ ಬ್ಯೂರೋದ ಅಧಿಕಾರಿಗಳು ನಡೆಸಿದ ದಿಢೀರ್ ಪರಿಶೀಲನೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಬೆಳಕಿಗೆ ಬಂದಿದೆ.
ಅಂಬಲತ್ತರೆ ವಿಲೇಜ್ ವ್ಯಾಪ್ತಿಯ ಪ್ರದೇಶದಲ್ಲಿ ಈ ಅಕ್ರಮ ನಡೆದಿರುವುದಾಗಿ ವರದಿಯಾಗಿದೆ.

ಪರಿಶೀಲನಾ ತಂಡದಲ್ಲಿ ಇನ್ಸ್ಪೆಕ್ಟರ್ ಶ್ರೀದಾಸನ್, ಎಎಸ್ಐ ಮಾರಾಯ ಜಯಚಂದ್ರನ್, ರಮೇಶ್, ಹಿರಿಯ ಸಿವಿಲ್ ಪೊಲೀಸ್ ಅಧಿಕಾರಿಗಳಾದ ಪ್ರದೀಪ್ ಹಾಗೂ ರಾಹುಲ್, ಸಿವಿಲ್ ಪೊಲೀಸ್ ಅಧಿಕಾರಿ ವಿಜೇಶ್ ಸೇರಿದಂತೆ ಇತರ ಸಿಬ್ಬಂದಿ ಪಾಲ್ಗೊಂಡಿದ್ದರು.

