​ಲಾಡ್ಜ್‌ನಲ್ಲಿ 15 ವರ್ಷದ ವಿದ್ಯಾರ್ಥಿ ಶವವಾಗಿ ಪತ್ತೆ

​

ಕಾಸರಗೋಡು: ತ್ರಿಶೂರು ವೆಂಬಲ್ಲೂರು ಶಾಲೆಯ ವಿದ್ಯಾರ್ಥಿಯೊಬ್ಬ ಲಾಡ್ಜ್‌ ಒಂದರ ಕೊಠಡಿಯಲ್ಲಿ ತೂಗುಹಾಕಿಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

​ಮೃತನನ್ನು ಅಲ್ಕೋಡ್ ತಾಯಿಲ್ ನಿವಾಸಿ ನೌಶಾದ್ ಅವರ ಮಗ ಟೀಪು ಅಬ್ದುಲ್ ರಹೀಮ್ (15) ಎಂದು ಗುರುತಿಸಲಾಗಿದೆ.ಮಾಹಿತಿಯ ಪ್ರಕಾರ, ಕಾಸರಗೋಡು ಕೆಎಸ್‌ಆರ್‌ಟಿಸಿ ಬಸ್ ಡಿಪೋ ಬಳಿ ಇರುವ ‘ಪರಿಶ್ರಮ್’ ಲಾಡ್ಜ್‌ನ ಕೊಠಡಿಯಲ್ಲಿ ಬಾಲಕನು ತೂಗುಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಘಟನೆಯ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!