ಕನ್ನಡ ರಾಜ್ಯೋತ್ಸವ: ಪತ್ರಕರ್ತ, ಸಾಹಿತಿ ಗಿರೀಶ್ ಪಿ.ಎಂ. ಚಿತ್ತಾರಿಗೆ ಗೌರವ

ಕಾಸರಗೋಡು: ಕನ್ನಡ ಸಂಘ (ನೋಂ), ವಾಣಿಜ್ಯ ತೆರಿಗೆಗಳ ಇಲಾಖೆ, ಬೆಂಗಳೂರು ಹಾಗೂ ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಸಹಯೋಗದಲ್ಲಿ ನವೆಂಬರ್ 1ರಂದು ನಡೆಯಲಿರುವ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಗಡಿನಾಡಿನ ಪತ್ರಕರ್ತ ಹಾಗೂ ಸಾಹಿತಿ ಗಿರೀಶ್ ಪಿ.ಎಂ. ಚಿತ್ತಾರಿ ಅವರನ್ನು ಗೌರವಿಸಲಾಗುವುದು.

ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ನಿರಂತರ ಕೊಡುಗೆ ನೀಡುತ್ತಿರುವ ಕನ್ನಡ ಭವನ ಮತ್ತು ಗ್ರಂಥಾಲಯದ ಭವ್ಯ ಸಭಾಂಗಣದಲ್ಲಿ ಭಾನುವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಸಮಾರಂಭ ನಡೆಯಲಿದೆ. ವಾಣಿಜ್ಯ ತೆರಿಗೆಗಳ ಅಪರ ಆಯುಕ್ತ ಎಂ.ಪಿ. ರವಿಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಭವನ ಮತ್ತು ಗ್ರಂಥಾಲಯದ ಸಂಸ್ಥಾಪಕ ಡಾ. ವಾಮನ್‌ರಾವ್ ಬೇಕಲ್ ಜ್ಯೋತಿ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಾಣಿಜ್ಯ ತೆರಿಗೆಗಳ ಅಪರ ಆಯುಕ್ತ ಆರ್.ಡಿ. ಮೇಘಣ್ಣನವರ್ ಉಪಸ್ಥಿತರಿರಲಿದ್ದಾರೆ.

ಪತ್ರಿಕೋದ್ಯಮ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಿರೀಶ್ ಪಿ.ಎಂ. ಚಿತ್ತಾರಿ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಗಡಿನಾಡ ಕಾಸರಗೋಡಿನ ಒಬಂತ್ತು ಮಂದಿ ಸಾಧಕರನ್ನು ಕನ್ನಡ ಸಂಘದ ವತಿಯಿಂದ ಸನ್ಮಾನಿಸಲಾಗುವುದು. ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಡಾ. ಸುರೇಶ್ ನೆಗಳಗುಳಿ, ಪ್ರದೀಪ್ ಬೇಕಲ್, ವಸಂತ ಕೆರೆಮನೆ, ಜಗನ್ನಾಥ ಶೆಟ್ಟಿ ಪಿ.ಕೆ., ಅಖಿಲೇಶ್ ನಗುಮುಗಮ್, ವಸಂತ ಭಾರಡ್ಕ, ಗುರುರಾಜ್ ಕಾಸರಗೋಡು ಹಾಗೂ ಮುರಳಿ ಪಾರೆಕಟ್ಟೆ ಗೌರವಕ್ಕೆ ಪಾತ್ರರಾಗಲಿದ್ದಾರೆ.

ಕಾರ್ಯಕ್ರಮದಲ್ಲಿ ವಾಣಿಜ್ಯ ತೆರಿಗೆಗಳ ಅಪರ ಆಯುಕ್ತ ಹಾಗೂ ಸೇವಾ ಅಧಿಕಾರಿಗಳ ಸಂಘದ ಅಧ್ಯಕ್ಷ ರಮೇಶ್ ಕುಮಾರ್, ವಾಣಿಜ್ಯ ತೆರಿಗೆಗಳ ಸಿ ಮತ್ತು ಡಿ ದರ್ಜೆ ನೌಕರರ ಸಂಘದ ಅಧ್ಯಕ್ಷ ಧರ್ಮರಾಜು ಸಿ. ಹಾಗೂ ಇಲಾಖೆಯ ಎಸ್‌ಸಿ/ಎಸ್‌ಟಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ. ದೊರೈ ಉಪಸ್ಥಿತರಿರಲಿದ್ದಾರೆ.

ಸಮಾರಂಭದ ಅಂಗವಾಗಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.), ಕಾಸರಗೋಡು ವತಿಯಿಂದ ಸಾಂಸ್ಕೃತಿಕ ಕಲಾ ವೈಭವ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗುರುರಾಜ್ ಎಂ.ಆರ್. ಮತ್ತು ಮಧು ಕೋಡನಾಡು ಕಾರ್ಯಕ್ರಮದ ನಿರ್ವಹಣೆ ಮಾಡಲಿದ್ದಾರೆ.

ಕನ್ನಡ ಸಂಘದ ಅಧ್ಯಕ್ಷ ಕೆ.ಸಿ. ಮಂಜುನಾಥ್, ಉಪಾಧ್ಯಕ್ಷೆ ಶಬಿಸ್ತ ತಬಸ್ಸುಂ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯದರ್ಶಿ ಧರ್ಮರೇವಣ್ಣ ಜಿ.ಎಸ್., ಪ್ರಧಾನ ಕಾರ್ಯದರ್ಶಿ ಎಸ್.ಆರ್. ರಂಗರಾಮಯ್ಯ, ಖಜಾಂಚಿ ನಾಗಲಕ್ಷ್ಮಿ ಕೆ.ಎಸ್. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿದ್ದಾರೆ.

SHARE
Loading spinner

One thought on “ಕನ್ನಡ ರಾಜ್ಯೋತ್ಸವ: ಪತ್ರಕರ್ತ, ಸಾಹಿತಿ ಗಿರೀಶ್ ಪಿ.ಎಂ. ಚಿತ್ತಾರಿಗೆ ಗೌರವ”

Leave a Reply

Your email address will not be published. Required fields are marked *

error: Content is protected !!