ಕುಂಬಳೆ : ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ಎಸಗಿದ ಆರೋಪದ ಮೇಲೆ ಪತಿ ಮುಹಮ್ಮದ್ ಆಸಿಫ್ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ರಿಮಾಂಡ್ ವಿಧಿಸಿದೆ.

ಕಾಸರಗೋಡು ನಿವಾಸಿಯಾದ ಆಸಿಫ್, ತನ್ನ ಮಗಳನ್ನು ತನ್ನೊಂದಿಗೆ ಕಳುಹಿಸಿಕೊಡಲು ನಿರಾಕರಿಸಿದ ದ್ವೇಷದಿಂದ ಬಂಬ್ರಾಣ ಮೂಸ ಕ್ವಾರ್ಟಸ್‌ನಲ್ಲಿ ವಾಸವಾಗಿರುವ ಪತ್ನಿ ಶಮೀಮ ಎಸ್ ಕೆಲಸ ಮಾಡುತ್ತಿದ್ದ ಪೆಟ್ರೋಲ್ ಬಂಕ್‌ಗೆ ನುಗ್ಗಿ ಹಲ್ಲೆ ನಡೆಸಿ ಕುತ್ತಿಗೆ ಹಿಚುಕಿ ಕೊಲೆಗೆ ಯತ್ನಿಸಿದ್ದಾನೆ.
ಶಮೀಮ ನೀಡಿದ ದೂರಿನ ಮೇರೆಗೆ ಕುಂಬಳೆ ಪೊಲೀಸರು ನರಹತ್ಯಾಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

