
ಕಾಸರಗೋಡು : ದೌರ್ಜನ್ಯಕ್ಕೊಳಗಾಗಿದ್ದ 17 ವರ್ಷದ ಬಾಲಕಿಯೊಬ್ಬಳು ಎರಡು ತಿಂಗಳ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.

ರಹಸ್ಯ ಮಾಹಿತಿಯ ಮೇರೆಗೆ ತನಿಖೆ ನಡೆಸಿದ ಕುಂಬಳೆ ಪೊಲೀಸರು, ಘಟನೆಯನ್ನು ಖಚಿತಪಡಿಸಿಕೊಂಡು 18 ವರ್ಷದ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಸದ್ಯ ನವಜಾತ ಶಿಶುವು ಬಾಲಕಿಯ ಸಂಬಂಧಿಕರ ಆರೈಕೆಯಲ್ಲಿ ಸುರಕ್ಷಿತವಾಗಿದೆ ಎಂದು ಪೊಲೀಸರು ತಿಳಿಸಿದ್ದು, ಈ ಕುರಿತು ಸಮಗ್ರ ತನಿಖೆ ಮುಂದುವರೆದಿದೆ.


