ಮಂಜೇಶ್ವರ : ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಆಟೋ ರಿಕ್ಷಾ ಹಾಗೂ ಕಾರು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ರಿಕ್ಷಾ ಚಾಲಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕಾಇಾಂಗಾಡ್ ನಿವಾಸಿ ಮೋಹನ್ ಸಾವನ್ನಪ್ಪಿದ ದುರ್ದೈವಿ. ಏನೋ ಅವಶ್ಯಕ್ಕಾಗಿ ಕಾಇಾಂಗಾಡ್ ನಿಂದ ತಲಪಾಡಿ ಭಾಗಕ್ಕೆ ಆಗಮಿಸುತಿದ್ದ ಆಟೋ ರಿಕ್ಷಾಗೆ ತಲಪಾಡಿ ಭಾಗದಿಂದ ಕಾಸರಗೋಡು ಭಾಗಕ್ಕೆ ತೆರಳುತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಆಟೋ ರಿಕ್ಷಾ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಸ್ಥಳೀಯರ ಹಾಗೂ ಅಗ್ನಿಶಾಮಕ ದಳದ ಸಹಾಯದಿಂದ ಆಟೋ ಚಾಲಕನನ್ನು ಹೊರಕ್ಕೆ ತೆಗೆಯಲಾಗಿದೆ.
ಗಂಭೀರ ಗಾಯಗೊಂಡ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶವ ಮಂಗಲ್ಪಾಡಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.
ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಆಗಮಿಸಿದ್ದಾರೆ.