
ಕಾಸರಗೋಡು: ಕನ್ನಡ ಸಂಘ (ನೋಂ), ವಾಣಿಜ್ಯ ತೆರಿಗೆಗಳ ಇಲಾಖೆ, ಬೆಂಗಳೂರು ಹಾಗೂ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕಾಸರಗೋಡು ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1ರಂದು ‘ಸಾಂಸ್ಕೃತಿಕ ಕಲಾ ವೈಭವ–ಕಲಾವಿದರ ಕಲರವ’ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ. ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.), ಕಾಸರಗೋಡು ಸಂಸ್ಥೆಯ ಕಲಾವಿದರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ವೈಭವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಕನ್ನಡಾಭಿಮಾನಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ತಿಳಿಸಿದ್ದಾರೆ.


