ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ವಿರುದ್ಧ ಪೋಕ್ಸೋ ಕೇಸ್

​

ಕಾಸರಗೋಡು : ಬೇಡಗಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹದಿನೇಳರ ಹರೆಯದ ಬಾಲಕಿ ಗರ್ಭಿಣಿಯಾದ ಘಟನೆ ವರದಿಗೆ ಸಂಬಂಧಿಸಿ ಮುಳ್ಳೇರಿಯ ನಿವಾಸಿಯಾದ 18 ವರ್ಷದ ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

​ಕಳೆದ ಸೆಪ್ಟೆಂಬರ್‌ನಲ್ಲಿ ಯುವಕ ಬಾಲಕಿಯ ಮನೆಗೆ ತೆರಳಿ ಕೃತ್ಯವೆಸಗಿದ್ದನೆಂದು ಆರೋಪಿಸಲಾಗಿದೆ.ಇತ್ತೀಚೆಗೆ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ವೈದ್ಯರ ಸುಳಿವಿನ ಮೇರೆಗೆ ಹಾಗೂ ಬಾಲಕಿಯ ಹೆತ್ತವರ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ

SHARE
Loading spinner

Leave a Reply

Your email address will not be published. Required fields are marked *

error: Content is protected !!