
ಕಾಸರಗೋಡು : ಇಲ್ಲಿನ ರೈಲು ನಿಲ್ದಾಣದ ಡೋರ್ಮಿಟರಿಯಲ್ಲಿ ರಿಸೆಪ್ಷನಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಲೆಹೊರೆ ಕಾರ್ಮಿಕ, ಪೆರಿಯಾ ರಾರಪ್ಪನಡ್ಕ ನಿವಾಸಿ ಕೆ. ಇಸ್ಮಾಯಿಲ್ (47) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಠಡಿಗೆ ಅಕ್ರಮವಾಗಿ ನುಗ್ಗಿದ ಆರೋಪಿ, ಯುವತಿಯನ್ನು ಹಾಸಿಗೆಗೆ ದೂಡಿ, ಲೈಂಗಿಕ ಸಂಪರ್ಕಕ್ಕೆ ಯತ್ನಿಸಿ ಕಿರುಕುಳ ನೀಡಿದ್ದಾನೆ. ಆತನಿಂದ ತಪ್ಪಿಸಿಕೊಂಡು ಬಂದ ಯುವತಿ ಇತರರಿಗೆ ವಿಷಯ ತಿಳಿಸಿ, ಬಳಿಕ ರೈಲ್ವೇ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ಎಸ್ಎಚ್ಒ ಕೆ. ರಾಜೀವನ್ ನೇತೃತ್ವದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾಞಂಗಾಡ್ ನ್ಯಾಯಾಲಯಕ್ಕೆ ಹಾಜರುಪಡಿಸಲಾದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


