ಮಂಜೇಶ್ವರದ ಸಬಾಮರಿಯಂ ದೇರಳಕಟ್ಟೆ ನಿಟ್ಟೆ ಕಾಲೇಜಿನ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ : ಕಾಲೇಜಿನ ಟಾಪರ್ ಆಗಿ ಮೆರಗು.

ಮಂಜೇಶ್ವರ: ಮಂಜೇಶ್ವರ ಗುಡ್ಡಕ್ಕೇರಿ ನಿವಾಸಿ ಮೊಹಮ್ಮದ್ ಎಂ ಪಿ ಹಾಗೂ ಸಪ್ರೀನಾ ದಂಪತಿಗಳ ಪುತ್ರಿ ಸಬಾ ಮರಿಯಂ ದೇರಳಕಟ್ಟೆ ಕೆ ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ನಿಟ್ಟೆ ಕಾಲೇಜಿನ ಅಂತಿಮ ವರ್ಷದ ಬಿಎಸ್ಸಿ ವೈದ್ಯಕೀಯ ಚಿತ್ರಣ ತಂತ್ರಜ್ಞಾನ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿನ ಟಾಪರ್ ಆಗಿ ಹೊರ ಹೊಮ್ಮಿದ್ದಾಳೆ.

ಸಬಾ ಮರಿಯಂ ಅವರ ಈ ಸಾಧನೆಗೆ ಪಠ್ಯ ಮತ್ತು ಪ್ರಯೋಗಶೀಲ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಶ್ರಮದ ಫಲ ಎಂದು ಕಾಲೇಜಿನ ಪ್ರಾಧ್ಯಾಪಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿಟ್ಟೆ ಸಂಸ್ಥೆಯು ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಪರಿಚಯಿಸುತ್ತಾ ಬಂದಿದೆ.

ಸಬಾ ಮರಿಯಂ ಅವರ ಈ ಸಾಧನೆಗೆ ಕುಟುಂಬ, ಸ್ನೇಹಿತರು ಹಾಗೂ ಸ್ಥಳೀಯ ಸಂಘಟನೆಗಳು ಅಭಿನಂದನೆ ಸಲ್ಲಿಸಿದ್ದು, ಭವಿಷ್ಯತ್ತಿನಲ್ಲಿ ಇನ್ನೂ ಹೆಚ್ಚಿನ ಶ್ರೇಣಿಗೆ ತಲುಪುವಂತೆ ಹಾರೈಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!