ಕಾಸರಗೋಡು ಕನ್ನಡ ಗ್ರಾಮದಲ್ಲಿ ನವಂಬರ್ 1ರಂದು ಕಾಸರಗೋಡು ಜಿಲ್ಲಾ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ- ಕೇರಳ ಸರಕಾರಕ್ಕೆ ಮನವಿ

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕಾಸರಗೋಡು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಸಹಯೋಗದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 1 ಆದಿತ್ಯವಾರದಂದು ಬೆಳಿಗ್ಗೆ ಗಂಟೆ 9.00 ಕ್ಕೆ ಕಾಸರಗೋಡು ಜಿಲ್ಲಾ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆಯಂದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಕಾಸರಗೋಡು ಜಿಲ್ಲೆಯಾದ್ಯಂತ ಕನ್ನಡಪರ ಸಂಘ ಸಂಸ್ಥೆಗಳಲ್ಲಿ ಕನ್ನಡಿಗರು ಸ್ವಯಂ ಪ್ರೇರಿತರಾಗಿ ಕನ್ನಡ ಪ್ರತಿಜ್ಞೆಯನ್ನು ಕೈಗೊಳ್ಳಬೇಕೆಂದು ವಿನಂತಿಸಲಾಗಿದೆ.

ವರ್ಷಂಪ್ರತಿ ಕಳೆದ 36 ವರ್ಷಗಳಿಂದ ನಿರಂತರವಾಗಿ ನವಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮದಲ್ಲಿ ಕನ್ನಡ ನನ್ನ ಭಾಷೆ ,ಕನ್ನಡ ಸಂಸ್ಕೃತಿಗೆ ನಾನು ಅಭಿಮಾನ ಪಡುತ್ತೇನೆ ಕನ್ನಡ ಭಾಷೆ ಮತ್ತು ಕನ್ನಡ ಸಂಸ್ಕೃತಿಯನ್ನು ನಾನು ಗೌರವಿಸುತ್ತೇನೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ನಾನು ಸದಾ ಸಿದ್ದನಿದ್ದೇನೆ.” ಸಿರಿಗನ್ನಡಂ ಗೆಲ್ಗೆ -ಸಿರಿಗನ್ನಡಂ ಬಾಳ್ಗೆ” ಎಂಬ ಕನ್ನಡ ಪ್ರತಿಜ್ಞೆಯನ್ನು ಕೈಗೊಂಡು ಸ್ವಯಂ ಪ್ರೇರಿತರಾಗಿ ಭಾಗವಹಿಸುವಂತೆ ಎಲ್ಲರನ್ನು ಕೇಳಿಕೊಳ್ಳಲಾಗಿದೆ.
ಮನವಿ:-ಕೇರಳ ಸರಕಾರವು ಕನ್ನಡ ಭಾಷೆ, ಸಾಹಿತ್ಯ ,ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಮಗ್ರವಾದ ಕನ್ನಡ ಸಾಂಸ್ಕೃತಿಕ ಕನ್ನಡಿಕರಣ ಯೋಜನೆಯನ್ನು ಸಿದ್ಧಪಡಿಸಿ ಮುಂದಿನ ಬಜೆಟ್ ನಲ್ಲಿ ಘೋಷಿಸಬೇಕು.


ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವೆಂಬರ್ 28 ಮತ್ತು 29 ರಂದು ನಡೆಯುವ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ- 2026, ಕೇರಳ -ಕರ್ನಾಟಕ ಉತ್ಸವ ,ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವದಲ್ಲಿ ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕೇರಳ- ಕರ್ನಾಟಕ ಭವನ, ಶಿಲಾನ್ಯಾಸ ಸಮಾರಂಭಕ್ಕೆ ಕೇರಳ ಸರಕಾರದ ಮುಖ್ಯಮಂತ್ರಿ, ಸಚಿವರು, ಕಾಸರಗೋಡು ಜಿಲ್ಲೆಯ ಎಲ್ಲಾ ಶಾಸಕರು ಕಾಸರಗೋಡು ಜಿಲ್ಲಾ ಉಸ್ತುವಾರಿ ಸಚಿವರನ್ನು ಆಮಂತ್ರಿಸಲು ತೀರ್ಮಾನಿಸಲಾಗಿದೆ ಎಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಹೇಳಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!