ಕುಂಬಳೆ : ಕುಂಬಳೆಯಿಂದ ಪೆರ್ಲ ಕಡೆಗೆ ತೆರಳುವ ರಸ್ತೆಯ ಬಸ್ ನಿಲ್ದಾಣದ ಸಮೀಪ ಚರಂಡಿಯ ಕಾಂಕ್ರೀಟ್ ಸ್ಲ್ಯಾಬ್ ಹಾನಿಗೊಂಡಿದ್ದು, ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.


ಈ ರಸ್ತೆಯಲ್ಲಿ ಪ್ರತಿದಿನ ನೂರಾರು ಪಾದಚಾರಿಗಳು ಹಾಗೂ ವಿದ್ಯಾರ್ಥಿಗಳು ಸಂಚರಿಸುತ್ತಿದ್ದು, ಚರಂಡಿಯ ಸ್ಲ್ಯಾಬ್ ಮುರಿದು ಗುಂಡಿ ನಿರ್ಮಾಣವಾಗಿರುವುದರಿಂದ ಅಪಘಾತ ಸಂಭವಿಸುವ ಆತಂಕ ಎದುರಾಗಿದೆ.

ಸಮಸ್ಯೆ ಉಂಟಾಗಿ ಹಲವು ತಿಂಗಳುಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ದುರಸ್ತಿಗೆ ಮುಂದಾಗಿಲ್ಲ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ವಿಶೇಷವಾಗಿ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಪಾದಚಾರಿಗಳು ಈ ಸ್ಥಳದಲ್ಲಿ ಎಚ್ಚರಿಕೆಯಿಂದ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಯಾವುದೇ ಅನಾಹುತ ಸಂಭವಿಸುವ ಮೊದಲು ಹಾನಿಗೊಂಡ ಚರಂಡಿಯ ಕಾಂಕ್ರೀಟ್ ಸ್ಲ್ಯಾಬ್ ದುರಸ್ತಿಗೊಳಿಸಿ, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

