ಕುಂಬಳೆಯಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಪರಾರಿ

​ಕುಂಬಳೆ: ಇಲ್ಲಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂಗಡಿಗೆ ತೆರಳುತ್ತಿದ್ದ 51 ವರ್ಷದ ಮಹಿಳೆಯನ್ನು ಅಡ್ಡಗಟ್ಟಿ, ಬಲವಂತವಾಗಿ ಎಳೆದುಕೊಂಡು ಹೋಗಿ ಮಾನಭಂಗ ಎಸಗಿರುವ ಕುರಿತು ದೂರು ದಾಖಲಾಗಿದೆ.

ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅಘಾತಕಾರಿ ಕೃತ್ಯ ನಡೆದಿದ್ದು, ಮಜೀದ್ (45) ಎಂಬಾತನೇ ಈ ಕೃತ್ಯದ ಆರೋಪಿಯಾಗಿದ್ದಾನೆ.

ಘಟನೆಯ ಬೆನ್ನಲ್ಲೇ ಎಚ್ಚೆತ್ತಿರುವ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತಲೆಮರೆಸಿಕೊಂಡಿರುವ ಕಾಮುಕ ಆರೋಪಿಗಾಗಿ ತೀವ್ರ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!