ಶಿವರಾಮ ಕಾಸರಗೋಡು ಅವರ 61ನೇ ಜನ್ಮದಿನಾಚರಣೆ, 61ನೇ ಕನ್ನಡ ಯಾತ್ರೆ; ನ.28 ಮತ್ತು 29ರ ಕನ್ನಡ ಸಮ್ಮೇಳನದ ಸಿದ್ಧತೆ ಕುರಿತು ಸಮಾಲೋಚನಾ ಸಭೆ
ಕಾಸರಗೋಡು: ಕೇರಳ ರಾಜ್ಯದ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕಾಸರಗೋಡು ಇದರ 36ನೇ ಸಂಸ್ಥಾಪನಾ ವರ್ಷಾಚರಣೆ ನ.4ರಂದು ಸಂಜೆ 6 ಗಂಟೆಗೆ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಖ್ಯಾತ ಗಾಯಕರಿಂದ ಭಾವಗೀತೆ, ಜಾನಪದ ಗೀತೆ ಹಾಗೂ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರ 61ನೇ ಜನ್ಮದಿನಾಚರಣೆಯ ಅಂಗವಾಗಿ 61ನೇ ಕನ್ನಡ ಯಾತ್ರೆಯನ್ನೂ ಆಚರಿಸಲಾಗುವುದು.

ಇದೇ ಸಂದರ್ಭದಲ್ಲಿ ನ.28 ಮತ್ತು 29ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಲಿರುವ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ-2026, ಕೇರಳ-ಕರ್ನಾಟಕ ಉತ್ಸವ ಹಾಗೂ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವದ ಯಶಸ್ವಿ ಆಯೋಜನೆ ಕುರಿತು ಸಮಾಲೋಚನಾ ಸಭೆ ನಡೆಯಲಿದೆ. ಕಾಸರಗೋಡು ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳ ಸಂಘಟನೆ ಕುರಿತು ಚರ್ಚಿಸಲಿದ್ದಾರೆ.

