ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ .ಉಳಿಯತ್ತಡ್ಕ ಕಾರ್ಯ ಕ್ಷೇತ್ರದ ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವಲಯದ ಉಳಿಯತ್ತಡ್ಕ ಕಾರ್ಯ ಕ್ಷೇತ್ರದ ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ ಶ್ರೀ ಗೋಪಾಲಕೃಷ್ಣ ಶಾಲೆ ಕೂಡ್ಲುನಲ್ಲಿ ನಿನ್ನೆ ನಡೆಯಿತ್ತು .

ಕೂಡ್ಲು ಶಾಲಾ ಮುಖ್ಯೋಪಾಧ್ಯಾರಾದ ಶ್ರೀಮತಿ ಶ್ರೀಜಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು . ಕೂಡ್ಲು ಶಾಲೆಯ PTA ಅಧ್ಯಕ್ಷರಾದ ಶ್ರೀ ಶ್ರೀಧರ ಅಧ್ಯಕ್ಷ ಸ್ಥಾನ ವಹಿಸಿದರು . ಎಕ್ಸೈಸಸ್ ಆಫೀಸರ್ ಶ್ರೀ ಕಣ್ಣನ್ ಕುಂಞಿ ಅವರು ದುಶ್ಟಟಗಳ ಬಗ್ಗೆ ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಉತ್ತಮವಾದ ಮಾಹಿತಿ ನೀಡಿದರು .

ಈ ಸಂದರ್ಭದಲ್ಲಿ ಶಾಲಾ ಅಧ್ಯಾಪಕರಾದ ಶ್ರೀ ಹರ್ಷ ಕುಮಾರ್ ,ವಲಯದ ಮೇಲ್ವಿಚಾರಕರಾದ ಶ್ರೀ ಗೋಪಾಲಕೃಷ್ಣ ,ಉಳಿಯತ್ತಡ್ಕ ಕಾರ್ಯ ಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಜ್ಯೋತಿ ಮಾಯಿಪ್ಪಾಡಿ ,ಸೀತಾಂಗೋಳಿ ಕಾರ್ಯ ಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಸರಿತ ಸೀತಾಂಗೋಳಿ ,
ಕೂಡ್ಲು ಒಕ್ಕೂಟದ ಕೋಶಾಧಿಕಾರಿ ನಾರಾಯಣ ಪಾರೆಕಟ್ಟೆ , ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು .

ಈ ಕಾರ್ಯಕ್ರಮಕ್ಕೆ ವಲಯದ ಮೇಲ್ವಿಚಾರಕರಾದ ಶ್ರೀ ಗೋಪಾಲಕೃಷ ಸ್ವಾಗತಿಸಿ , ಉಳಿಯತ್ತಡ್ಕ ಕಾರ್ಯ ಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಜ್ಯೋತಿ ಮಾಯಿಪಾಡಿ ವಂದಿಸಿದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!