ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವಲಯದ ಅಡ್ಕತ್ತಬೈಲು ಕಾರ್ಯ ಕ್ಷೇತ್ರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ಇತೀಚೆಗೆ ನಡೆಯಿತ್ತು .
ಕಾಸರಗೋಡು ತಾಲೂಕಿನ ಯೋಜನಾಧಿಕಾರಿ ಶ್ರೀ ದಿನೇಶ್ ಅವರು ದೇವಸ್ಥಾನದ ವಠಾರ ಸ್ವಚ್ಛತಾ ಇದ್ರೆ ಬರುವ ಭಕ್ತರ ಮನಸ್ಸಿಗೆ ನೆಮ್ಮದಿ , ಶಾಂತಿಯನ್ನ ನೀಡುತ್ತದೆ ಎoದು ತಿಳಿಸುತ್ತಾ , ತಾಲೂಕಿನಲ್ಲಿ ಪ್ರಥಮವಾಗಿ ನಡೆಯುವ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಕಾಸರಗೋಡು ತಾಲೂಕಿನ ಭಜನಾ ಪರಿಷತ್ ಅಧ್ಯಕ್ಷರಾದ ಶ್ರೀ ವೆಂಕಟ್ರಮಣ ಹೊಳ್ಳ , ವಲಯದ ಮೇಲ್ವಿಚಾರಕರಾದ ಶ್ರೀ ಗೋಪಾಲಕೃಷ್ಣ ,
ಅಡ್ಕತ್ತಬೈಲು ಕಾರ್ಯ ಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಶೋಭ , ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ , ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಘದ ಎಲ್ಲಾ ಸದಾಸ್ಯರು ಉಪಸ್ಥಿತರಿದ್ದರು.