ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ನವೆಂಬರ್ 12ರಂದು ಪಾದಯಾತ್ರೆ

ಕಾಸರಗೋಡು: ಪ್ರಜಾಪ್ರಭುತ್ವದ ಸಂರಕ್ಷಣೆಯ ಸಂದೇಶದೊಂದಿಗೆ ಭಾರತೀಯ ಜನತಾ ಪಾರ್ಟಿ ಕಾಸರಗೋಡು ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 12ರಂದು ಕಾಸರಗೋಡು ನಗರದಲ್ಲಿ ಪಾದಯಾತ್ರೆ ನಡೆಯಲಿದೆ.

ಗುರುವಾರ ಮಧ್ಯಾಹ್ನ 3 ಗಂಟೆಗೆ ನಡೆಯುವ ಪಾದಯಾತ್ರೆಯನ್ನು ಶಾಸಕ ಬಿ.ಬಿ. ಗೋಪಕುಮಾರ್ ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವ. ಎಸ್. ಸುರೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ .

ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆ ಹಾಗೂ ಜನಜಾಗೃತಿಯ ಉದ್ದೇಶದಿಂದ ಈ ಪಾದಯಾತ್ರೆ ಆಯೋಜಿಸಲಾಗಿದೆ. ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!