ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಕಲಮಶ್ಶೇರಿಯಲ್ಲಿ ಬಂಧನ

ಕಾಸರಗೋಡು : ಜಿಲ್ಲೆಯ ಬೇಡಗಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ಕೊಲೆ ಯತ್ನ ಸೇರಿದಂತೆ ವಿವಿಧ ಗಂಭೀರ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಸಾಹಸಿಕವಾಗಿ ಬಂಧಿಸಿದ್ದಾರೆ.

ಪಳ್ಳಿಕರೆ ಕೋಟಕ್ಕುನ್ನು ನಿವಾಸಿ ಮುಹಮ್ಮದ್ ಅರಾಫತ್ ಬಂಧಿತ ಆರೋಪಿಯಾಗಿದ್ದು, ಎರ್ನಾಕುಲಂ ಜಿಲ್ಲೆಯ ಕಲಮಶ್ಶೇರಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

​2011 ಮೇ 18 ರಂದು ರಸ್ತೆಯಲ್ಲಿ ನಡೆದು ಕೊಂಡು ಹೋಗುತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ ಬೈಕಿನಲ್ಲಿ ಬಂದು ಎರಡೂವರೆ ಪವನ್ ಚಿನ್ನದ ತಾಳಿಮಾಲೆಯನ್ನು ಕಿತ್ತುಕೊಳ್ಳಲಾಗಿತ್ತು. ಈ ಕೃತ್ಯದ ವೇಳೆ ಮಹಿಳೆಗೆ ಗಂಭೀರ ಗಾಯಗಳಾಗಿದ್ದವು.

ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಕಾಸರಗೋಡು ಜುಡೀಷಿಯಲ್ ಫಸ್ಟ್ ಕ್ಲಾಸ್ ಮೆಜಿಸ್ಟ್ರೇಟ್ ನ್ಯಾಯಾಲಯ ವಾರಂಟ್ ಹೊರಡಿಸಿತ್ತು.

ಈತನ ಮೇಲೆ ಬೇಡಗಂ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣವೂ ದಾಖಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!