ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳರಿಗೆ ಕರ್ನಾಟಕ ರಾಜ್ಯೋತ್ಸವ ಗೌರವಾರ್ಪಣೆ

ಕಾಸರಗೋಡು: ಗಡಿನಾಡು ಕಾಸರಗೋಡಿನ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರಿಗೆ ‘ಕರ್ನಾಟಕ ರಾಜ್ಯೋತ್ಸವ-2026 ಗೌರವಾರ್ಪಣೆ’ ನೀಡಿ ಗೌರವಿಸಲಾಯಿತು.

ಕರ್ನಾಟಕ ಸರಕಾರದ ವಾಣಿಜ್ಯ ತೆರಿಗೆಗಳ ಇಲಾಖೆ ಬೆಂಗಳೂರು ಇದರ ಕನ್ನಡ ಸಂಘ ಹಾಗೂ ಕಾಸರಗೋಡು ಕನ್ನಡ ಭವನದ ಜಂಟಿ ಆಶ್ರಯದಲ್ಲಿ ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಕನ್ನಡ ಭುವನೇಶ್ವರಿ ವೇದಿಕೆಯಲ್ಲಿ ನಡೆದ ರಾಜ್ಯೋತ್ಸವ ಸಂಭ್ರಮದಲ್ಲಿ ಗೌರವಾರ್ಪಣೆ ನೆರವೇರಿತು.

ಕರ್ನಾಟಕ ವಾಣಿಜ್ಯ ತೆರಿಗೆಗಳ ಇಲಾಖೆಯ ಅಪರ ಆಯುಕ್ತ ಟಿ.ಆರ್. ಕೃಷ್ಣಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಎಂ.ಪಿ. ರವಿಪ್ರಸಾದ್, ರಮೇಶ್ ಕುಮಾರ್, ಧರ್ಮರಾಜು ಸಿ., ದೊರೈ, ಕನ್ನಡ ಸಂಘದ ಅಧ್ಯಕ್ಷ ಕೆ.ಸಿ. ಮಂಜುನಾಥ್, ಉಪಾಧ್ಯಕ್ಷೆ ಶಬಿಸ್ತ ತಬಸ್ಸುಮ್, ಪ್ರಧಾನ ಕಾರ್ಯದರ್ಶಿ ಎಸ್.ಆರ್. ರಂಗರಾಮಯ್ಯ, ಕೋಶಾಧಿಕಾರಿ ನಾಗಲಕ್ಷ್ಮಿ ಕೆ.ಎಸ್., ದಶರತಿ ಹಾಗೂ ಸಂಧ್ಯಾರಾಣಿ ಟೀಚರ್ ಉಪಸ್ಥಿತರಿದ್ದರು.

ಮಧು ಕೊಡನಾಡು ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಭವನದ ಸಂಸ್ಥಾಪಕ ಡಾ. ವಾಮನ್ ರಾವ್ ಬೇಕಲ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ವಸಂತ್ ಕೆರೆಮನೆ ವಂದಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!