ಕುಂಬಳೆ ಉಪಜಿಲ್ಲಾ ಎಲ್ ಪಿ ಅರೆಬಿಕ್ ಕಲೋತ್ಸವ ರನ್ನರ್ ಅಪ್

ಬದಿಯಡ್ಕ: ಬದಿಯಡ್ಕದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದಲ್ಲಿ ಎಲ್.ಪಿ. ವಿಭಾಗದ ಅರೆಬಿಕ್ ಕಲೋತ್ಸವದಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆ ರನ್ನರ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಹಾಗೂ ಪರಿಶ್ರಮದ ಮೂಲಕ ಈ ಸಾಧನೆ ಮಾಡಿದ್ದು, ಶಾಲೆಗೆ ಹೆಮ್ಮೆ ತಂದಿದ್ದಾರೆ.

ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಶಾಲೆಯ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!