ಕಾಸರಗೋಡು :ಬಸ್ ಕಂಡಕ್ಟರ್ ಮೇಲೆ ಆಟೋ ಚಾಲಕನಿಂದ ಹಲ್ಲೆ: ಖಾಸಗಿ ಬಸ್‌ಗಳ ದಿಢೀರ್ ಮುಷ್ಕರ

ಕಾಸರಗೋಡು: ತಳಂಗರೆಯಲ್ಲಿ ಬಸ್ ಹತ್ತುತ್ತಿದ್ದ ಸಂದರ್ಭದಲ್ಲಿ ಕಂಡಕ್ಟರ್ ಮುಹಮ್ಮದ್ ಸಾಲಿಹ್ (36) ಅವರ ಮೇಲೆ ಆಟೋ ಚಾಲಕನೊಬ್ಬ ಹಲ್ಲೆ ನಡೆಸಿರುವುದಾಗಿ ದೂರು ದಾಖಲಾಗಿದೆ.

ಬಸ್ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ವಾಗ್ವಾದವೇ ಹಲ್ಲೆಗೆ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ಮುಹಮ್ಮದ್ ಸಾಲಿಹ್ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆಯನ್ನು ಖಂಡಿಸಿ ಕಾಸರಗೋಡು–ತಳಂಗರೆ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ಗುರುವಾರ ಬೆಳಿಗ್ಗೆ ದಿಢೀರ್ ಮುಷ್ಕರ ನಡೆಸಿದವು. ಯಾವುದೇ ಮುನ್ಸೂಚನೆಯಿಲ್ಲದೆ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!