
ಕಾಸರಗೋಡು : ಕುಂಬಳೆ- ಪೆರ್ಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ, ಗಂಭೀರ ಗಾಯಗೊಂಡಿದ್ದ ರಿಕ್ಷಾ ಪ್ರಯಾಣಿಕ ಮಹಮೂದ್ (75) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬುಧವಾರ ನಡೆದ ಈ ಅಪಘಾತದಲ್ಲಿ ರಿಕ್ಷಾ ಚಾಲಕ ಕೆ.ಎಚ್. ಅಬ್ದುಲ್ ಅಜೀಜ್ ಮತ್ತು ಮಹಮೂದ್ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕುಂಬಳೆ ಸಹಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಹಾಗೂ ಕಾಸರಗೋಡಿನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ಮಹಮೂದ್ ಅವರು ಬಾನುವಾರ ಮುಂಜಾನೆ ಕೊನೆಯೆಳೆದುಕೊಂಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಕಾಸರಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಿ ಚೇತರಿಸಿಕೊಳ್ಳುತ್ತಿದ್ದಾರೆ.


