ನಾಳೆ ಎಡನೀರು ಮಠಕ್ಕೆ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಭೇಟಿ

ಕಾಸರಗೋಡು: ಕೇರಳ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಕಾಸರಗೋಡು ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ನ. 20ರಂದು ಪ್ರಸಿದ್ಧ ಎಡನೀರು ಶ್ರೀ ಮಠಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮಠದ ಶ್ರೀಮದ್ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಆಶೀರ್ವಾದ ಪಡೆಯಲಿದ್ದು, ಮಠದಿಂದಲೇ ಅವರ ಕಾಸರಗೋಡು ಜಿಲ್ಲಾ ಪ್ರವಾಸ ಆರಂಭವಾಗಲಿದೆ.

ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ನಾಳೆ ಕಾಸರಗೋಡು ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರ ಭೇಟಿಯ ಹಿನ್ನೆಲೆಯಲ್ಲಿ ಎಡನೀರು ಮಠದಲ್ಲಿ ವಿಶೇಷ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಮಠಕ್ಕೆ ಆಗಮಿಸಿದ ಸಂದರ್ಭದಲ್ಲಿ ಶ್ರೀಪಾದಂಗಳವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಿರುವ ಅವರು, ಮಠದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಕುರಿತು ಮಾಹಿತಿ ಪಡೆದುಕೊಳ್ಳುವ ನಿರೀಕ್ಷೆಯಿದೆ.

ಕೇರಳ ಮುಖ್ಯಮಂತ್ರಿಯಾಗಿ ಕಾಸರಗೋಡು ಜಿಲ್ಲೆಗೆ ಅವರ ಮೊದಲ ಭೇಟಿ ಇದಾಗಿರುವುದರಿಂದ ಈ ಪ್ರವಾಸ ವಿಶೇಷ ಮಹತ್ವ ಪಡೆದುಕೊಂಡಿದೆ. ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಬಳಿಕ ಅವರು ತಮ್ಮ ಮುಂದಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!