ಕಾಸರಗೋಡು/ ತ್ರಿಶೂರು : ಹಿಂದಿನ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಕೆ. ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್, ಇದೀಗ ಬಿಜೆಪಿಗೆ ರಾಜೀನಾಮೆ ನೀಡಿ ಮರಳಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.

ಅವರ ಆಪ್ತರಾದ ತ್ರಿಶೂರು ಯುವ ಮೋರ್ಚಾ ಅಧ್ಯಕ್ಷ ಮನು ಪಳ್ಳತ್ತ್ ಕೂಡ ರಾಜೀನಾಮೆ ಸಲ್ಲಿಸಲಿದ್ದು, ಇಬ್ಬರೂ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರಿಗೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಭರವಸೆ ನೀಡಿದ್ದ ಸ್ಥಾನಮಾನಗಳು ಚುನಾವಣೆ ಬಳಿಕವೂ ಸಿಕ್ಕಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಪದ್ಮಜಾ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಸಹೋದರ ಕೆ. ಮುರಳೀಧರನ್ ಅವರ ಮನವೊಲಿಕೆಯೊಂದಿಗೆ ಒಂದೂವರೆ ತಿಂಗಳ ಹಿಂದೆಯೇ ಮರಳಿ ಕಾಂಗ್ರೆಸ್ ಸೇರುವ ಪ್ರಕ್ರಿಯೆ ಆರಂಭವಾಗಿತ್ತು ಎಂದು ವರದಿಯಾಗಿದೆ.

