ನಾಳೆ ಜಿಲ್ಲೆಯಾದ್ಯಂತ ಪೋಲಿಯೊ ಲಸಿಕಾ ಕಾರ್ಯಕ್ರಮ: 1,188 ಕೇಂದ್ರಗಳ ಸಿದ್ಧತೆ

ಕಾಸರಗೋಡು: ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊದಿಂದ ರಕ್ಷಣೆ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನವು ನಾಳೆ ಜಿಲ್ಲೆಯಾದ್ಯಂತ ನಡೆಯಲಿದೆ. ಈ ಅಭಿಯಾನದಡಿ ಜಿಲ್ಲೆಯ 1,01,779 ಮಕ್ಕಳಿಗೆ ಪೋಲಿಯೊ ಲಸಿಕೆಯ ಎರಡು ಹನಿ ನೀಡುವ ಗುರಿ ಹೊಂದಲಾಗಿದೆ. ಇವರಲ್ಲಿ 876 ಮಕ್ಕಳು ಇತರ ರಾಜ್ಯಗಳ ವಲಸೆ ಕಾರ್ಮಿಕರ ಕುಟುಂಬಗಳಿಗೆ ಸೇರಿದವರಾಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಲಸಿಕಾ ಕಾರ್ಯಕ್ರಮಕ್ಕಾಗಿ ಜಿಲ್ಲೆಯಾದ್ಯಂತ ಒಟ್ಟು 1,188 ಕೇಂದ್ರಗಳನ್ನು ತೆರೆಯಲಾಗಿದೆ. ಭಾನುವಾರ ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಈ ಕೇಂದ್ರಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗುವುದು.

ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಇಲಾಖೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಿಗದಿತ ದಿನದಂದು ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಲು ಸಾಧ್ಯವಾಗದ ಐದು ವರ್ಷದೊಳಗಿನ ಮಕ್ಕಳಿಗೆ ನವೆಂಬರ್ 23 ಮತ್ತು 24ರಂದು ಆರೋಗ್ಯ ಕಾರ್ಯಕರ್ತರು ಹಾಗೂ ಸ್ವಯಂಸೇವಕರು ಮನೆಮನೆಗೆ ತೆರಳಿ ಲಸಿಕೆ ನೀಡಲಿದ್ದಾರೆ. ಈ ಮೂಲಕ ಜಿಲ್ಲೆಯ ಎಲ್ಲ ಅರ್ಹ ಮಕ್ಕಳಿಗೂ ಪೋಲಿಯೊ ಲಸಿಕೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!