ಪೆರ್ಲದ ಬಜಕೂಡ್ಲುವಿನಲ್ಲಿ ದುರಂತ: ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

​

ಪೆರ್ಲ : ಇಲ್ಲಿಯ ಬಜಕೂಡ್ಲುವಿನಲ್ಲಿ ಸ್ಥಳೀಯ ನಿವಾಸಿ ಈಶ್ವರ ನಾಯ್ಕ ಅವರ ಪತ್ನಿ ಜಯಲಕ್ಷ್ಮಿ (57) ಮನೆಯ ಸಮೀಪದ ತೋಟದ ಆವರಣ ರಹಿತ ಬಾವಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

​ಮಾಹಿತಿ ತಿಳಿದ ತಕ್ಷಣ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಹಾಗೂ ಮುಂದಿನ ಕ್ರಮಕ್ಕಾಗಿ ಕಾಸರಗೋಡು ಜನರಲ್ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಜಯಲಕ್ಷ್ಮಿ ಅವರು ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದ್ದು, ಸಾವಿನ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

ಈ ಸಂಬಂಧ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸುರಕ್ಷತಾ ಕ್ರಮವಿಲ್ಲದ ಬಾವಿಗಳು ಎಷ್ಟು ಅಪಾಯಕಾರಿ ಎಂಬುದನ್ನು ಈ ದುರಂತ ಮತ್ತೊಮ್ಮೆ ನೆನಪಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!