ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು ; ಭಕ್ತರಿಂದ ಆರ್ಥಿಕ ಸಹಕಾರಕ್ಕೆ ಮನವಿ

ಕಾಸರಗೋಡು: ಶತಮಾನಗಳ ಇತಿಹಾಸ ಹೊಂದಿರುವ ಕಾಸರಗೋಡು ಸಮೀಪದ ಶಿವನಗರದ ಪ್ರಸಿದ್ಧ ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಪ್ರಗತಿಯಲ್ಲಿವೆ.

ಏಳು ಮಾಗಣೆಯ ಭಕ್ತರ ಆರಾಧನಾ ಕೇಂದ್ರವಾಗಿರುವ ಈ ಪುರಾತನ ದೇವಸ್ಥಾನವು ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವವನ್ನು ಹೊಂದಿದೆ. ಕಾಲಕ್ರಮೇಣ ಶಿಥಿಲಾವಸ್ಥೆಗೆ ತಲುಪಿದ್ದ ದೇವಸ್ಥಾನವನ್ನು ಪುನರ್‌ನಿರ್ಮಿಸಿ ಹಿಂದಿನ ವೈಭವಕ್ಕೆ ಮರಳಿಸುವ ಉದ್ದೇಶದಿಂದ ಜೀರ್ಣೋದ್ಧಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ದೇವಸ್ಥಾನದ ವಿವಿಧ ನಿರ್ಮಾಣ ಕಾಮಗಾರಿಗಳನ್ನು ಹಂತ ಹಂತವಾಗಿ ನಡೆಸಲಾಗುತ್ತಿದ್ದು, ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ.

ಈ ಮಹತ್ವದ ಧಾರ್ಮಿಕ ಕಾರ್ಯಕ್ಕೆ ಭಕ್ತರು ಹಾಗೂ ಸಾರ್ವಜನಿಕರು ಕೈಜೋಡಿಸುವಂತೆ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಮನವಿ ಮಾಡಿದೆ.

ಪುರಾತನ ದೇವಸ್ಥಾನದ ಪುನರುಜ್ಜೀವನದ ಮೂಲಕ ಧಾರ್ಮಿಕ ಪರಂಪರೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸುವ ಪ್ರಯತ್ನಕ್ಕೆ ಭಕ್ತರಿಂದ ಸಹಕಾರ ನಿರೀಕ್ಷಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!