
ಬದಿಯಡ್ಕ : ಭಾನುವಾರ ರಾತ್ರಿ ಬದಿಯಡ್ಕ ಮೇಲಿನ ಪೇಟೆಯಲ್ಲಿ ತರವಾಡು ಮನೆಯಿಂದ ಸ್ಕೂಟರ್ನಲ್ಲಿ ಮರಳುತ್ತಿದ್ದಾಗ ನಿಯಂತ್ರಣ ತಪ್ಪಿದ ವೇಗದ ಕಾರೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲಿ ತಲೆಕೆಳಗಾಗಿ ಮಗುಚಿ ಬಿದ್ದಿದೆ.

ಈ ಅಪಘಾತದಲ್ಲಿ ಬದಿಯಡ್ಕದ ಮರ್ಚೆಂಟ್ ಸೊಸೈಟಿ ಪಿಗ್ಮಿ ಏಜೆಂಟ್ ರಾಜೇಶ್ ಬರ್ಲ, ಅವರ ಪುತ್ರಿ ರತನ್ಯ ಮತ್ತು ಪತ್ನಿ ವೀಣಾ ಗಂಭೀರವಾಗಿ ಗಾಯಗೊಂಡಿದ್ದರು.

ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೀಣಾ ಸೋಮವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


